ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಲಿ ಧನಂಜಯ್ ತಂದೆಯಾದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಧನಂಜಯ್ ಧನ್ಯತಾ ದಂಪತಿ ಶೀಘ್ರದಲ್ಲೇ ಪೋಷಕರಾಗಲಿದ್ದೇವೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು.
ಇಂದು ಗಂಡು ಮಗುವಿನ ಆಗಮನದ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ.ಮಗುವಿನ ಪುಟ್ಟ ಕೈಗಳನ್ನು ಹಿಡಿದಿರುವ ಫೋಟೋ ಹಂಚಿಕೊಂಡ ಡಾಲಿ ಧನಂಜಯ್, ”ಗಂಡು ಮಗುವನ್ನು ಸ್ವಾಗತಿಸಿದ್ದೇವೆ. ನಿಮ್ಮ ಪ್ರೀತಿ ಆಶೀರ್ವಾದವಿರಲಿ” ಎಂದು ಬರೆದುಕೊಂಡಿದ್ದಾರೆ.
ಅಭಿಮಾನಿಗಳು ಅಭಿನಂದನೆಗಳ ಮಹಾಪೂರ ಹರಿಸುತ್ತಿದ್ದಾರೆ.ವೃತ್ತಿಯಲ್ಲಿ ಖ್ಯಾತ ನಟನಾಗಿರುವ ಡಾಲಿ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ದಾಂಪತ್ಯ ಪಯಣ ಆರಂಭಿಸಿದರು.
ಈ ವರ್ಷಾರಂಭ ಧನಂಜಯ್ ತಂದೆಯಾಗುತ್ತಿರುವ ಶುಭ ಸುದ್ದಿ ಹಂಚಿಕೊಂಡಿದ್ದರು ಎಂದು ವರದಿಯಾಗಿವೆ. ಆ ಪ್ರಕಾರ ನಟನಿಗೆ ಈಗಾಲೇ ಶುಭಕೋರಲಾಗಿತ್ತು. 2 ದಿನಗಳ ಹಿಂದೆ ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ, ಶೀಘ್ರದಲ್ಲೇ ಪೋಷಕರಾಗುತ್ತಿದ್ದೇವೆ ಎಂದು ದಂಪತಿ ತಿಳಿಸಿದ್ರು.
ಇಂದು ಮಗುವಿನ ಆಗಮನದ ಬಗ್ಗೆ ಆನ್ಲೈನ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಫೋಟೋಗೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ. ಸೆಲೆಬ್ರಿಟಿಗಳೂ ಸೇರಿದಂತೆ ಫ್ಯಾನ್ಸ್ ಕಾಮೆಂಟ್ ಸೆಕ್ಷನ್ನಲ್ಲಿ ಅಭಿನಂದನೆಗಳ ಮಳೆ ಹರಿಸಿದ್ದಾರೆ. ‘ಅಭಿನಂದನೆಗಳು’ ಎಂದು ಮೇಘನಾ ರಾಜ್ ತಿಳಿಸಿದ್ರೆ,
‘ನಿಮ್ಮಿಬ್ಬರಿಗೂ ಅಭಿನಂದನೆಗಳು. ಜೂನಿಯರ್ ಡಿ ಗೆ ನನ್ನ ಪ್ರೀತಿ’ ಎಂದು ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ತಿಳಿಸಿದ್ದಾರೆ.
ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ‘ಒ ಮೈ ಗಾಡ್, ಬೇಬಿ ಡಿಡಿ’ ಎಂದು ಪ್ರೀತಿ ವ್ಯಕ್ತಪಡಿಸಿದ್ದಾರೆ. ಅಮೂಲ್ಯ ‘ಕಂಗ್ರಾಜುಲೇಶನ್ಸ್’ ಎಂದು ತಿಳಿಸಿದ್ದಾರೆ.

