ಶಿವಮೊಗ್ಗ,ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ ಯಶಸ್ಸನ್ನು ಸಾಧಿಸಿರುವ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಪಾಲ್ಗೊಂಡರು.
ನಂತರ ಮಾತನಾಡಿದ ಅವರು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವ ಮತ್ತು ಅಭಿವೃದ್ಧಿ ಮಂತ್ರಕ್ಕೆ ಜನರು ನೀಡಿರುವ ಈ ಭರ್ಜರಿ ಬೆಂಬಲವು ಪ್ರಜಾಪ್ರಭುತ್ವದ ವಿಜಯವಾಗಿದೆ.

ಈ ವಿಜಯೋತ್ಸವದಲ್ಲಿ ಜಿಲ್ಲೆಯ ಮುಖಂಡರು ಹಾಗೂ ನೂರಾರು ಉತ್ಸಾಹಿ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಜಯಘೋಷಗಳೊಂದಿಗೆ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು.

ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

