ಶಿವಮೊಗ್ಗ, “ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 111 ವರ್ಷಗಳಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ,” ಎಂದು ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಶ್ಲಾಘಿಸಿದರು.
ಇಂದು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಿಷತ್ತು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ, ಕನ್ನಡದ ಅಸ್ಮಿತೆಯನ್ನು ಕಾಪಾಡುವ ಶಕ್ತಿಯಾಗಿ ಬೆಳೆದು ಬಂದಿದೆ. ಇಂತಹ ಸಾಂಸ್ಕೃತಿಕ ಸಂಸ್ಥೆಗಳ ಬಲವರ್ಧನೆಗೆ ನಮ್ಮ ಸಂಪೂರ್ಣ ಸಹಕಾರ ಸದಾ ಇರಲಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

