ಪಶ್ಚಿಮ ಬಂಗಾಳ | ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಪಿಎ ಚಂದ್ರ ನಾಥ್ ದತ್ ಗುಂಡೆಟಿಗೆ ಬಲಿ!

ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ನಾಯಕ ಸದ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥರನ್ನು ಬುಧವಾರ ತಡರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆಪ್ತನನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಈ ಹತ್ಯೆ ಘಟನೆ ನಡೆದ ಕೆಲ ಗಂಟೆಗಳ ನಂತರ ಆಸ್ಪತ್ರೆಗೆ ತೆರಳಿದ ಸುವೇಂದು ಅಧಿಕಾರಿ, ಹತ್ಯೆಯನ್ನು ‘ಶೀತಲ ರಕ್ತದ ಕೊಲೆ’ ಮತ್ತು ‘ಕ್ರೂರ ಕೊಲೆ’ ಎಂದು ಕರೆದಿದ್ದಾರೆ. ಆಸ್ಪತ್ರೆಯ ಹೊರಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ದಾಳಿ ಪೂರ್ವ ಯೋಜಿತವಾಗಿದ್ದು, ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಚಂದ್ರನಾಥ್ ರಥ ತಮ್ಮ ರಾಜಕೀಯ ಜೀವನದ ಕಳೆದ ಸುಮಾರು 10 ವರ್ಷಗಳಲ್ಲಿ ಹತ್ತಿರದಿಂದ ಜೊತೆಯಾಗಿದ್ದ ಸಹೋದ್ಯೋಗಿ ಎಂದು ಅಧಿಕಾರಿ ಭಾವುಕರಾಗಿ ನೆನಪಿಸಿಕೊಂಡಿದ್ದಾರೆ.

Author