ಸಾಗರ ತಾಲ್ಲೂಕಿನಲ್ಲಿ ಇಂದು ಬೆಳಿಗ್ಗೆ ಒಂದು ಬಸ್ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಸಾಗರದಿಂದ ಜೋಗ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಸಣ್ಣಮನೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ.
ಅಪಘಾತ ಸಂಭವಿಸಿದ ಕ್ಷಣದಲ್ಲಿ ಸ್ಥಳದಲ್ಲಿ ಸ್ವಲ್ಪ ಸಮಯ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಆದರೆ, ಅದೃಷ್ಟವಶಾತ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಸ್ಥಳೀಯರು ಹಾಗೂ ವಾಹನ ಸವಾರರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ವಾಹನವನ್ನು ಸುರಕ್ಷಿತವಾಗಿ ತೆರವುಗೊಳಿಸಲಾಯಿತು.
ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.

