ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗರಾರೊಂದಿಗೆ ಮಾತನಾಡಿ ಸರ್ಕಾರದ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ.
ಪಕ್ಕದ ರಾಜ್ಯದ ಗೌರ್ನರ್ ಕಾರ್ಕಾಳಕ್ಕೆ ಬಂದಿದ್ದರು.ಆಗ ವಕೀಲ ಹೆಣ್ಣು ಮಕ್ಕಳು ಶೌಚಾಲಯ ಕಟ್ಟಲು ಒಂದು ಕೋಟಿ ಕೇಳಿದ್ದೆ.ರಾಜ್ಯ ಸರ್ಕಾರ ಒಂದು ವರ್ಷದಿಂದ ಹಣವನ್ನು ಕೊಟ್ಟಿಲ್ಲ ಪ್ರಶ್ನೆ ಮಾಡಿದಕ್ಕೆ ನಿಮ್ಮ ಕಾಲದಲ್ಲಿ ಕೇಳಿದಾಗ ಎಲ್ಲಾ ಕೊಟ್ಟಿದ್ದೀರಾ ಎಂದರು.
ಆದರೆ ಇಂದು ಹಾಸನದಲ್ಲಿ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ.ನಮ್ಮ ಕಾಲದಲ್ಲಿ ಬಿಡುಗಡೆಯಾದ ಹಣದ ಕಾಮಗಾರಿಗೆ ಟೇಪ್ ಕಟ್ ಮಾಡಲು ಹೋಗಿದ್ದಾರೆ.ಈ ಸರ್ಕಾರದ ಮೇಲೆ ಟೀಕೆ ಮಾಡಲು ಸರ್ಕಾರ ಮಾತು ಉಳಿಸಿಕೊಂಡಿಲ್ಲ.
ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು.
ಎಂಎಸ್ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು.
ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು.
ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ ಕೋರ್ಟ್ಗೆ ಹೋಗಿಲ್ಲವೆಂದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4.5 ಸಾವಿರ ಕೋಟಿ ಸಾಲವನ್ನು ನಾನು ತೀರಿಸಿದ್ದೇನೆ.ನನ್ನ ಕಾಲದ ಸಾಲವನ್ನು ಇವರೇನು ತೀರಿಸಿಲ್ಲವೆಂದರು.
ಅವರು ಎಷ್ಟು ಲಕ್ಷ ವಾಚ್ ಕಟ್ಟಿದ್ದಾರೆ ಎನ್ನೋದು ಮುಖ್ಯ ಅಲ್ಲ.ವಾಚ್ನ್ನು ಹೇಗೆ ಖರೀದಿ ಮಾಡಿದರೆ ಎನ್ನೋದನ್ನು ಮುಖ್ಯ.ಅವರ ದುಡಿಮೆಯಲ್ಲಿ ಖರೀದಿ ಮಾಡಿದ್ದಾರಾ ಹೇಗೆ ಎನ್ನೋದು ಮುಖ್ಯವೆಂದು ಎಚ್ಡಿಕೆ ವ್ಯಂಗ್ಯವಾಡಿದ್ದಾರೆ.



