ಭದ್ರಾವತಿ, ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಕುಂಬಾರ ಬೀದಿಯಲ್ಲಿ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಪರಿಣಾಮ 28 ವರ್ಷದ ಚೇತನ್ ಎಂಬ ಯುವಕ ಮೃತಪಟ್ಟಿದ್ದಾನೆ.
ಗಾರೆ ಕೆಲಸಕ್ಕೆ ನೀರು ಒದಗಿಸಲು, ಸಾಕೆಟ್ಗೆ ವೈರ್ ಸಿಕ್ಕಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ.
ಘಟನೆ ನಡೆದ ಬೆನ್ನಲ್ಲೆ ಈತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ. ಮಾರ್ಗ ಮಧ್ಯೆ ಯುವಕ ಸಾವನ್ನಪ್ಪಿದ್ದ.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

