ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು

ಬೆಂಗಳೂರು, ಭಾರತದ ಮಾಜಿ ಪ್ರಧಾನಿ, ಮಣ್ಣಿನ ಮಗ H. D. ದೇವೆಗೌಡ ಅವರು 94ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಗಣ್ಯರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ K.B ಪ್ರಸನ್ನ ಕುಮಾರ್ ಅವರು ದೇವೇಗೌಡರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದರು.

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು.

ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು ಸ್ಮರಿಸಿದ್ದು, ದೇಶದ ರಾಜಕೀಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಶಂಸಿಸಿದರು.

Author