ಬೆಂಗಳೂರಿನ ಆಹಾರ ನಿಗಮದ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಕೆಎಚ್.ಮುನಿಯಪ್ಪ ರವರನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮ ಅಧ್ಯಕ್ಷರರಾದ ಚೇತನ್ ಗೌಡರವರು ಸಚಿವರೊಂದಿಗೆ ಈ ಕೆಳಗಿನ ವಿಷಯಕ್ಕೆ ಮನವಿ ಮಾಡಿರುತ್ತಾರೆ ಅದೇನಂದರೆ,
ಶಿವಮೊಗ್ಗ ನಗರದಲ್ಲಿ ವಾಸವಾಗಿರುವ ಸುಮಾರು 5000ಕ್ಕೂ ಅಧಿಕ ಬಡ ಕೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನು ರದ್ದುಪಡಿಸಿರುವ ಕ್ರಮವನ್ನು ಪುನರ್ ಪರಿಶೀಲಿಸಬೇಕೆಂದು ಹಾಗೂ ನಗರದ ಹೊರವಲಯದಲ್ಲಿರುವ ಗೋಪಾಲಗೌಡ ಬಡಾವಣೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅನೌಪಚಾರಿಕ ಪಡಿತರ ಪ್ರದೇಶ ಸಹಾಯಕ ನಿರ್ದೇಶಕರ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಲು ಯಾವುದೇ ರೀತಿಯ ಬಸ್ ಸಂಪರ್ಕ ಇಲ್ಲದಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.
ಆದ್ದರಿಂದ ಸದರಿ ಕಚೇರಿಯನ್ನು ಶಿವಮೊಗ್ಗ ನಗರದ ವಿನೋಬನಗರದಲ್ಲಿ ವ್ಯವಸ್ಥಿತವಾಗಿ ಬಸ್ ಸಂಪರ್ಕ ಹೊಂದಿರುವ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿ ಖಾಲಿ ಇರುವ ಹಳೆ ಸಬ್ ರಿಜಿಸ್ಟರ್ ಕಚೇರಿಗೆ ಸ್ಥಳಾಂತರಿಸಿ, ಶಿವಮೊಗ್ಗ ನಗರದ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಯನ್ನು ಸಲ್ಲಿಸಿದ್ದಾರೆ.
ಈ ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು ಎಂದು ಚೇತನ್ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ .
ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾದ ಗಣೇಶ್ ರವರು ಉಪಸ್ಥಿತರಿದ್ದರು.

