ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಮಾಳೂರು ಗ್ರಾಮದ ನಿವಾಸಿ ಕನ್ನಡ ಚಲನಚಿತ್ರ ಹಾಗೂ ಕಿರುತೆರೆ ವಲಯದಲ್ಲಿ ಸಂಭಾಷಣೆಕಾರ ಮತ್ತು ಲೇಖಕರಾಗಿ ಗುರುತಿಸಿಕೊಂಡಿದ್ದ ಟಿ.ಜಿ. ನಂದೀಶ್ (37) ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇವರು ಇತ್ತೀಚೆಗೆ ನಿಧನರಾದ ದಿಲೀಪ್ರಾಜ್ ಜೊತೆಗೂ ಪಾರು ಧಾರವಾಹಿಯಲ್ಲಿ ಕೆಲಸ ಮಾಡಿದ್ದರು. ಕನ್ನಡ ಕಿರುತೆರೆ ಸಂಭಾಷಣೆಕಾರ ಟಿ.ಜಿ. ನಂದೀಶ್ಇನ್ನೂ ಮನೆಯಿಂದಲೇ ಕೆಲಸ ಮಾಡುತ್ತಿದ್ದ ನಂದೀಶ್ರವರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕುಟುಂಬದ ಸದಸ್ಯರು ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಮಾಳೂರಿನವರಾದ ನಂದೀಶ್ ‘ಚಿತ್ತಾರ’ ಸಂಸ್ಥೆಯೊಡನೆ ಸೇರಿ ಅನೇಕ ಧಾರಾವಾಹಿಗಳು ಮತ್ತು ಚಿತ್ರಗಳಿಗೆ ಕಥೆ ಬರೆದಿದ್ದರು. ಮಾಳೂರಿನಲ್ಲಿದ್ದುಕೊಂಡೇ ಕಥೆಗಳನ್ನು ಬರೆಯುತ್ತಿದ್ದ ನಂದೀಶ್ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.
ನಂದೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮ ಮಾಳೂರಿನ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದೆ. ಗುರುವಾರ ಇಂದು ಮಧ್ಯಾಹ್ನ 12:30 ಕ್ಕೆ ಅಲ್ಲಿಯೇ ಅಂತ್ಯಸಂಸ್ಕಾರ ನಡೆಯಲಿದೆ.
ನಂದೀಶ್ರ ಅಕಾಲಿಕ ನಿಧನಕ್ಕೆ ಚಿತ್ರರಂಗ ಹಾಗೂ ಕಿರುತೆರೆಯ ಗಣ್ಯರು, ನಿರ್ದೇಶಕರು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

