ಕೊಲ್ಲೂರು–ಬೈಂದೂರು ಸಂಪರ್ಕ ಕಡಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ತ್ವರಿತ ಕ್ರಮದಿಂದ ದುರಸ್ಥಿ ಮಾಡಲಾಗಿದ್ದು, ಪ್ರಸ್ತುತ ವಾಹನ ಸಂಚಾರ ಎಂದಿನಂತೆ ಪುನರಾರಂಭಗೊಂಡಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ, ಸ್ಥಳೀಯ ಜನಪ್ರತಿನಿಧಿಗಳು, ಹೆದ್ದಾರಿ ಇಂಜಿನಿಯರ್ಗಳು ಹಾಗೂ ಆಡಳಿತಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆದು, ಬೈಂದೂರಿನಿಂದ ಕೊಲ್ಲೂರುವರೆಗೆ ಕಾಮಗಾರಿ ನಡೆಯುತ್ತಿರುವ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಕ್ರಮ ಕೈಗೊಂಡು, ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ತುರ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ಸಹಕರಿಸಿದ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ವರೂಪ, ತಹಶೀಲ್ದಾರರಾದ ಮಹತ್, ಹೆದ್ದಾರಿ ಇಂಜಿನಿಯರ್ ಶಶಿಧರ್, ಉಡುಪಿ ದಿಶಾ ಸಮಿತಿ ಸದಸ್ಯರಾದ ರಮೇಶ್ ಪೂಜಾರಿ, ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಕೊಠಾರಿ ಹಾಗೂ ಸ್ಥಳೀಯರಾದ ಶಿವರಾಜ್ ಪೂಜಾರಿ, ಸಿದ್ದೇಶ್, ಗುರುರಾಜ್ ಶಾನುಭಾಗ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಜನರ ಸುರಕ್ಷತೆ ಮತ್ತು ಸುಗಮ ಸಂಚಾರವೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.

