ಮಂಡ್ಯ | 10 ಅಡಿ ಉದ್ದ ಹಾಗೂ 30 ಕೆ.ಜಿ.ಗೂ ಹೆಚ್ಚು ತೂಕವಿರುವ ಹೆಬ್ಬಾವು ಸೆರೆ..!

ಮಂಡ್ಯ

ಮಂಡ್ಯ, ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ.

ಸುಮಾರು 10 ಅಡಿ ಉದ್ದ ಹಾಗೂ 30 ಕೆ.ಜಿಗೂ ಹೆಚ್ಚು ತೂಕವಿರುವ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ, ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು.

ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು, ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದ್ದಾರಂದು ತಿಳಿದುಬಂದಿದೆ.

Author