ಶಿವಮೊಗ್ಗ, 2026-27ನೇ ಸಾಲಿಗೆ ಮೆಟ್ರಿಕ್ ನಂತರದ ಕೊರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್‌ಸೈಟ್ www.twd.kar.nic.in ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ದಾಖಲಾತಿಗಳೊಂದಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ ಸಾಗರ/ ಸೊರಬ/ ಶಿಕಾರಿಪುರ/ ಭದ್ರಾವತಿ/ ಹೊಸನಗರ/ ತೀರ್ಥಹಳ್ಳಿ ಇವರುಗಳನ್ನು ಹಾಗೂ
ದೂ.ಸಂ: 08182-200266 ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

