ತೀರ್ಥಹಳ್ಳಿ ತಾಲ್ಲೂಕಿನ ಗಡಿಕಲ್ ಬಳಿಯಲ್ಲಿ ಜೂನ್ 10 ರಂದು ದನ ಕದಿಯುತ್ತಿದ್ದ ದೃಶ್ಯವೊಂದು ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಸ್ವತಃ ಕಾರಿನ ಮಾಲೀಕರು ಫೇಸ್ಬುಕ್ನಲ್ಲಿ ಪೋಸ್ಟ್ ವೊಂದನ್ನ ಬರೆದುಕೊಂಡಿದ್ದರು. ತಮ್ಮ ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದ್ದ ದೃಶ್ಯದ ತುಣಕನ್ನ ಅವರು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಗ್ರಾಮದಲ್ಲಿ ಜಾನುವಾರು ಕಳವಿಗೆ ಪ್ರಯತ್ನಿಸಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಿಗೆ ಬಳಸಿದ 4 ಲಕ್ಷ ರೂ. ಮೌಲ್ಯದ ಎರ್ಟಿಗಾ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ರೋಷನ್ ಬೇಗ್ (31), ಟಿಪ್ಪುನಗರದ ಇಮ್ರಾನ್ (39) ಬಂಧಿತರು. ಇವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


