ರಾಜ್ಯದಲ್ಲಿ‌ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ

ಕರ್ನಾಟಕ

ಬೆಂಗಳೂರು,ಭಾರತಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರ ಕಳೆಯುತ್ತಾ ಬಂದರೂ ಮಳೆ ಪ್ರಮಾಣ ಕುಸಿತಗೊಂಡಿದೆ. ಕರ್ನಾಟಕದಲ್ಲಿ ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಶೇ.21ರಷ್ಟು ಕಡಿಮೆ ಮಳೆಯಾಗಿದ್ದು, ನೈಋತ್ಯ ಮುಂಗಾರು ದುರ್ಬಲಗೊಂಡಿದೆ.ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಕೂಡ ಕಡಿಮೆಯಾಗಿರುವುದು ನೀರಿನ ಅಭಾವದ ಆತಂಕಕ್ಕೆ ಕಾರಣವಾಗಿದೆ.

ಅದರ ಬೆನ್ನಲ್ಲೇ ಮುಂದಿನ ತಿಂಗಳು ಎಲ್‌ ನೀನೋ ಚಂಡಮಾರುತ ರಾಜ್ಯದ ಮುಂಗಾರಿನ ಮೇಲೆ ಪರಿಣಾಮ ಬೀರಿದರೆ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾದರೂ ಅಚ್ಚರಿ ಪಡಬೇಕಿಲ್ಲ ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.

ವಾಡಿಕೆಗಿಂತ ಕಡಿಮೆ ಮಳೆ:

ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

Author