ಶಿವಮೊಗ್ಗ | ತಾಯಿ ಮಕ್ಕಳು ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ

ಶಿವಮೊಗ್ಗ

ಶಿವಮೊಗ್ಗ, ಶಿಕಾರಿಪುರ ತಾಲ್ಲೂಕ್, ಹರಗುವಳ್ಳಿ ಗ್ರಾಮ ವಾಸಿ ನವೀನ್ ಕುಮಾರ್ ಎಂಬುವವರ ಅಕ್ಕ ನಾಗವೇಣಿ ಎಂಬ 31 ವರ್ಷ ಮಹಿಳೆ ತನ್ನ 14 ವರ್ಷದ ಅಶ್ವತ್ ಹಾಗೂ 12 ವರ್ಷದ ಅಶ್ವಿನ್ ಎಂಬ ಮಕ್ಕಳನ್ನು ಕರೆದುಕೊಂಡು ಜೂ. 17 ರಂದು ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ವಿಚ್ಛೇದಿತೆಯಾಗಿದ್ದು, 1 ವರ್ಷದಿಂದ ತಮ್ಮ ನವೀನ್ ಕುಮಾರ್ ಎಂಬುವವರ ಮನೆಯಲ್ಲಿ ವಾಸವಿದ್ದರು.

ನಾಗವೇಣಿಯ ಚಹರೆ: 5 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಬಿಳಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಮತ್ತು ವೇಲ್ ಧರಿಸಿರುತ್ತಾರೆ.

ಅಶ್ವತ್‌ನ ಚಹರೆ : 4 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಎಣ್ಣೆಗಪ್ಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುತ್ತಾನೆ.

ಅಶ್ವಿನ್‌ನ ಚಹರೆ: 3 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಎಣ್ಣೆಗಪ್ಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪುಬಣ್ಣದ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ.

ಈ ತಾಯಿ ಮಕ್ಕಳ ಬಗ್ಗೆ ಸುಳಿವು ಇದ್ದಲ್ಲಿ ದೂರವಾಣಿ ಸಂಖ್ಯೆ: ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ ನಂ:-08182- 261413,ಡಿ.ಎಸ್.ಪಿ ಶಿಕಾರಿಪುರ ಉಪ ವಿಭಾಗ ಶಿಕಾರಿಪುರ:-08187-222443/ 9480803323, ಪಿ..ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ. 08187-222443/ 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Author