ಭಟ್ಕಳ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ; ಪಿಎಸ್‌ಐ ಬಂಧನ

ಕ್ರೈಂ

ಭಟ್ಕಳ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ಅಭಿನಂದನ್ ಗೌಡ ರನ್ನು ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಾಲಕಿ ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು ಎಂದು ತಿಳಿದು ಬಂದಿದೆ.ದೂರಿನ ಆಧಾರದ ಮೇಲೆ ಪೋಕ್ಸೋ ಸೇರಿದಂತೆ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಿಕೊಂಡ ಭಟ್ಕಳ ಪೊಲೀಸರು ತನಿಖೆ ನಡೆಸಿ ಆರೋಪಿ ಅಭಿನಂದನ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದೂ ಹೇಳಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ಮೂಲದವರಾದ ಅಭಿನಂದನ್ ಗೌಡ ಕೆಲವೇ ತಿಂಗಳುಗಳ ಹಿಂದೆ ಮಂಕಿ ಪೋಲಿಸ್ ಠಾಣೆಗೆ ವರ್ಗವಾಗಿ ಬಂದಿದ್ದರು.

ಈತ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳ ವಸತಿ ಗ್ರಹ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ ನಡೆಸಿದ್ದ ಎಂದು ಆರೋಪಿಸಲಾಗಿದೆ.ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಪೊಕ್ಸೋ ಅಡಿ ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ತನಿಖೆ ನಂತರ ಹೊರಬೀಳಲಿವೆ.

Author