ಶಿವಮೊಗ್ಗ 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಆಸಕ್ತರು ರಾಷ್ಟ್ರೀಯ ಪೋರ್ಟಲ್ https://nationalawardstoteachers.education.gov.in
ಅಥವಾ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್
https://schooleducation.karnataka.gov.in ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ: 13/07/2026 ಕಡೆಯ ದಿನಾಂಕವಾಗಿದೆ. ದಿನಾಂಕ 30/04/2026 ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕರು ಸಹ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ತಮ್ಮ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.


