ಶಿವಮೊಗ್ಗ | BMW ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಈಗ ಪೊಲೀಸರ ಅತಿಥಿ

ಕ್ರೈಂ

ಶಿವಮೊಗ್ಗ, ಐಷಾರಾಮಿ ಬಿಎಂಡಬ್ಲ್ಯುಕಾರಿನಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ವಿನೋಬನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಜುಲೈ 06 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪ ಮಾರ್ಗವಾಗಿ ಮಾದಕ ವಸ್ತುವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾದ ವಿನೋಬನಗರ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡವು ಸ್ಥಳದ ಮೇಲೆ ದಾಳಿ ನಡೆಸಿ, 46 ವರ್ಷದ ಮೌಲಾಸಾಬಾ ಕರ್ಜಗಿ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author