ಇಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಿ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿದಿದ್ದು ಯಾಕೆ?

ದೇಶ

ನವದೆಹಲಿ, ಕತಾರ್‌ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ. ಜುಲೈ 13ರ ಇಂದು ಭಾರತ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಿದೆ. ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿದೆ.

ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇಂದು ನಡೆದಿಲ್ಲ .74 ವರ್ಷದ ಕತಾರ್‌ನ ಮಾಜಿ ಅಮೀರ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಅವರನ್ನು ದಾರ್ಶನಿಕ ನಾಯಕ ಮತ್ತು ಭಾರತದ ನಿಜವಾದ ಸ್ನೇಹಿತ ಎಂದು ಕರೆದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಕತಾರ್‌ನ ಪಿತಾಮಹ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ.

ಅವರು ಕತಾರ್ ಅನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದ ದಾರ್ಶನಿಕ ನಾಯಕರಾಗಿದ್ದರು. ನಾವು ಅವರನ್ನು ನಿಜವಾದ ಸ್ನೇಹಿತ ಎಂದು ನೆನಪಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 2024 ರಲ್ಲಿ ಕತಾರ್‌ಗೆ ನನ್ನ ಕೊನೆಯ ಭೇಟಿಯ ಸಮಯದಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿತು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ಇದಲ್ಲದೆ, ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಬಹಳಷ್ಟು ಜನಕ್ಕೆ ಇದರ ಮಾಹಿತಿ ಕೊರತೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲಿ ಕೂಡ ಕೆಲವರು ಧ್ವಜ ಅರ್ಧಕ್ಕೆ ಹರಿಸಿದ ಅಧಿಕಾರಿಗಳು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದ್ದಾರೆ ಆದರೆ ವಾಸ್ತವ ವಿಚಾರ ಈ ಮೇಲಿಂತಿದೆ.

Author