ಹೊಸನಗರ,ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು.ಹೊಸನಗರ ಮಾರ್ಗದಲ್ಲಿ ಹುಲಿಕಲ್ ಘಾಟ್ ಕಾಮಗಾರಿ ವಿಕ್ಷಣೆಗೆ ಹೊರಡುತ್ತಿದ್ದ ವೇಳೆಯಲ್ಲಿ ಮಾರ್ಗಮಧ್ಯದಲ್ಲಿ ದಿಢೀರ್ ಶಾಲೆಗೆ ಭೇಟಿ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದರು. ಈ ವೇಳೆ ಮುಖ್ಯ ಶಿಕ್ಷಕರು ಶಾಲೆ ಮಕ್ಕಳ ಕ್ರೀಡಾ ಸಾಧನೆ ಬಗ್ಗೆ ವಿವರಿಸಿದಾಗ, ಸಚಿವರು ಪ್ರತಿಕ್ರಿಯಿಸಿ,ರಾಜ್ಯ ಸರ್ಕಾರದಿಂದ ಬೃಹತ್ ಮಟ್ಟದಲ್ಲಿ ಭಾರತ್ ಜೋಡೋ ಕ್ರೀಡಾ ಕೂಟ ಆಯೋಜನೆ ಮಾಡಲಾಗುತ್ತಿದ್ದು, ಈ ಕ್ರೀಡಕೂಟದ ಸದುಪಯೋಗವನ್ನು ಕ್ರೀಡೆಯಲ್ಲಿ ಸಾಧನೆ ಮಾಡಿರುವ ನಿಮ್ಮ ಶಾಲೆಯ ಮಕ್ಕಳಿಗೆ ಪಡೆದುಕೊಳ್ಳುವಂತೆ ತಿಳಿಸಿದರು.

ಪ್ರಾಂಶುಪಾಲರು ಸರ್ಕಾರಿ ಶಾಲೆ ಅಭಿವೃದ್ದಿ ಹೊಂದುಬೇಕಾಗಿದೆ. ಮೂಲಭೂತ ಸೌಕರ್ಯ ಕೊರತೆಯಿದೆ ಎಂದರು.
