ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಎಲ್ಲಿ ಆರಂಭಿಸಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಸಿಎಂ ಡಿಕೆ ಶಿವಕುಮಾರ್ ಈ ಸಂಬಂಧಿಸಿದಂತೆ ಸಭೆಯನ್ನು ನಡೆಸಿದ್ದಾರೆ. ಈ ನಡುವೆ ವಿಜಯೇಂದ್ರ ಅವರು ಈ ಕುರಿತಾಗಿ ಪತ್ರವನ್ನು ಬರೆದಿದ್ದಾರೆ.
ವಿಜಯೇಂದ್ರ ಪತ್ರದಲ್ಲಿ ಏನಿದೆ?
ಬೆಂಗಳೂರು ಅಭಿವೃದ್ಧಿಯೇ ಕರ್ನಾಟಕದ ಅಭಿವೃದ್ಧಿಯಲ್ಲ. ರಾಜ್ಯದ ಅಭಿವೃದ್ಧಿಯ ಫಲವು ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ, ಕಲ್ಯಾಣ ಕರ್ನಾಟಕ. ಮಲೆನಾಡು ಹಾಗೂ ಹಳೆ ಮೈಸೂರು ಭಾಗ ಸೇರಿದಂತೆ ಎಲ್ಲ ಪ್ರದೇಶಗಳಿಗೂ ಸಮಾನವಾಗಿ ತಲುಪುವಂತೆ ಯೋಜನೆಗಳನ್ನು ರೂಪಿಸುವುದು ಯಾವುದೇ ಸರ್ಕಾರದ ಜವಾಬ್ದಾರಿಯಾಗಿದೆ.

ಎರಡನೆಯದಾಗಿ, ಬೆಂಗಳೂರು ಈಗಾಗಲೇ ಜನಸಂಖ್ಯೆ, ವಾಹನ ದಟ್ಟಣೆ. ಕುಡಿಯುವ ನೀರು. ಸಂಚಾರ ಮತ್ತು ಪರಿಸರದ ಮೇಲೆ ಅತಿಯಾದ ಒತ್ತಡವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಬೃಹತ್ ಮೂಲ ಸೌಕರ್ಯ ಯೋಜನೆಯನ್ನು ಬೆಂಗಳೂರಿನ ಸುತ್ತಮುತ್ತಲೇ ಕೇಂದ್ರೀಕರಿಸುವುದು ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುವ ಇರಾದೆ ಎಂದಿದ್ದಾರೆ.

