ಚಿಕ್ಕಮಗಳೂರು, ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ನಗರ ಜಾಮಿಯಾ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಕೇಸ್ ದಾಖಲಿಸಿದ್ದಾರೆ.
ಕಳೆದ ಗುರುವಾರ ಯೂತ್ ಫಾರ್ ನೇಷನ್ ಸಂಘಟನೆ ವತಿಯಿಂದ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆ ಖಂಡಿಸಿ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು.
ಈ ವೇಳೆ ಸಿ.ಟಿ.ರವಿ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
