ಶಿವಮೊಗ್ಗ | ಗುರುಪೂರ್ಣಿಮೆಯ ಅಂಗವಾಗಿ ಶ್ರೀ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಜೀವನ ಸಂಜೆ ವೃದ್ಧಾಶ್ರಮದಲ್ಲಿ ಹಣ್ಣು ಮತ್ತು ಬ್ರೆಡ್ ವಿತರಣೆ

ಶಿವಮೊಗ್ಗ

ಶಿವಮೊಗ್ಗ, ಶ್ರೀ ಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.), ಬಾಪೂಜಿ ನಗರ ಇವರ ಆಶ್ರಯದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಜೀವನ ಸಂಜೆ ವೃದ್ಧಾಶ್ರಮದಲ್ಲಿ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮ ಹಾಗೂ ಭಾವಗಾನ ತಂಡದ ರಸಮಂಜರಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಲಾವಿದ ವಹಿಸಿದ್ದರು. ಶ್ರೀ ಭದ್ರಾವತಿ ವಾಸು ಹಾಗೂ ಶ್ರೀ ಎಸ್. ಆರ್. ಶಿವಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ತ್ಯಾಗರಾಜ್ ಮಿತ್ಯಾಂತ ಭಾಗವಹಿಸಿದ್ದರು. ಜೀವನ ಸಂಜೆ ವೃದ್ಧಾಶ್ರಮದ ಅಧ್ಯಕ್ಷರಾದ ಶ್ರೀ ಹಾಲಪ್ಪ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಡಾ. ಶರ್ಮಾ ಅವರು ನಿರೂಪಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮೂವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಬಳಿಕ ವೃದ್ಧಾಶ್ರಮದ ನಿವಾಸಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.

ಶ್ರೀ ನಾರಾಯಣ ಗುರುವಿನ ಸಮಾನತೆ, ಸೇವೆ ಹಾಗೂ ಮಾನವೀಯತೆಯ ಆದರ್ಶಗಳನ್ನು ಸ್ಮರಿಸಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Author