ಶಿವಮೊಗ್ಗ | ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ : ಆ‌ಗಸ್ಟ್ 14 ಕೊನೆಯ ದಿನ

ಶಿವಮೊಗ್ಗ

ಶಿವಮೊಗ್ಗ ,ಮೀನುಗಾರಿಕೆ ಇಲಾಖೆಯ 2026-27ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರೂ. 20,000/- ಮೌಲ್ಯದ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಯೋಜನೆ. (ಕಳೆದ 3 ವರ್ಷಗಳಲ್ಲಿ ಕಿಟ್ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು).

ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿ: ಈ ಯೋಜನೆಗೆ ಧನಸಹಾಯ ನೀಡಲಾಗುವುದು. (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು).

ಅರ್ಹ ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಸಂಬಂಧಿಸಿದಂತೆ https://shimoga.nic.in ಪೋರ್ಟಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ದಿ : 14-08-2026ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಅಥವಾ ಕೆಳಗಿನ ಮೊಬೈಲ್ ಸಂಖ್ಯೆಗಳಾದ ಶಿವಮೊಗ್ಗ: 9986040981, ಭದ್ರಾವತಿ: 9743370815, ಶಿಕಾರಿಪುರ: 9686939028, ಸಾಗರ: 9538044365, ಸೊರಬ : 9535386449, ತೀರ್ಥಹಳ್ಳಿ: 8655132438 ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರಾದ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author