ಚೆನ್ನೈ ನಟಿ ತ್ರಿಶಾ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ತಮಿಳಗ ವೆಟ್ರಿ ಕಳಗಂ’ (TVK) ನೀಡಿದ ದೂರಿನ ಬೆನ್ನಲ್ಲೇ, ಡಿಎಂಕೆ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕಾವೇರಿ ನೀರು ಹಂಚಿಕೆ ಕುರಿತು ನಡೆಸಿದ ಪ್ರತಿಭಟನೆಯಲ್ಲಿ ನಟಿ ತ್ರಿಶಾ ಹೆಸರು ಪ್ರಸ್ತಾಪಿಸಿ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಟಿವಿಕೆ ಪಕ್ಷವು ಪೋಲಿಸ್ ಠಾಣೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು. ಉದಯನಿಧಿ ಅವರನ್ನು ತಕ್ಷಣವೇ ಬಂಧಿಸಿ ಜೈಲಿಗಟ್ಟಬೇಕೆಂದು ಬಿಜೆಪಿ ಮುಖಂಡರು ಸಹ ತೀವ್ರ ಒತ್ತಾಯ ಹೇರಿದ್ದಾರೆ.
ತಂಜಾವೂರಿನಲ್ಲಿ ಉದಯನಿಧಿ ತಂಗಿರುವ ನಿವಾಸದ ಮುಂದೆ ತಮಿಳುನಾಡು ಪೊಲೀಸರು ಭಾರಿ ಭದ್ರತೆ ಕೈಗೊಳ್ಳಲಾಗಿದೆ.






