ಶಿವಮೊಗ್ಗ | ನಶೆಯಲ್ಲಿ ಉಪಟಳ ಕೊಡುತ್ತಿದ್ದ ಯುವಕ ಪೊಲೀಸರ ವಶಕ್ಕೆ

ಕ್ರೈಂ

ಶಿವಮೊಗ್ಗ, ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೂಳೆಬೈಲ್ ನಲ್ಲಿ ಜನಕ್ಕೆ ಉಪಟಳ ನೀಡುತ್ತಿದ್ದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಎನ್ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ಪ್ರಶಾಂತ್ ಕುಮಾರ್ ಮತ್ತು ನಿತಿನ್ ಕೆ. ಪೆಟ್ರೋಲಿಂಗ್ನಲ್ಲಿದ್ದ ವೇಳೆ ರಸ್ತೆಯ ಬಳಿ ವ್ಯಕ್ತಿಯೊಬ್ಬ ಕಿರಿಕ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಬಂದಿತ್ತು.

ಇದರನ್ವಯ ಸ್ಥಳಕ್ಕೆ ಹೋದ ಸಿಬ್ಬಂದಿಯನ್ನ ಕಂಡು ಆರೋಪಿ ಪರಾರಿ ಆಗಲು ಮುಂದಾಗಿದ್ದ. ಅಷ್ಟರಲ್ಲಿ ಜನರು ಪೊಲೀಸರು ಸೇರಿ ಆತನನ್ನು ಹಿಡಿದಿದ್ದಾರೆ. ಬಳಿಕ ಆತನನ್ನುಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಪರೀಕ್ಷೆ ಮಾಡಿಸಿದ್ದರು.

ಈ ವೇಳೆ ಆತ ಗಾಂಜಾ ಸೇದಿರುವುದು ಪಕ್ಕಾ ಆಗಿದೆ. ಹೀಗಾಗಿ ಮೆಡಿಕಲ್ ವರದಿಯ ಮೇಲೆ ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ರ ಕಲಂ 27(ಬಿ) ಪ್ರಕಾರ ಪ್ರಕರಣ ದಾಖಲಿಸಿ ಕ್ರಮವಹಿಸಿದ್ದಾರೆ

Author