ಶಿವಮೊಗ್ಗ | ಆಗಸ್ಟ್ 10 ರಂದು ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಾಚರಣೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ

ಶಿವಮೊಗ್ಗ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಜಿಲ್ಲಾದ್ಯಂತ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ರಾಷ್ಟಿçÃಯ ಜಂತು ಹುಳು ನಿವಾರಣೆ ದಿನ ಪೂರ್ವಭಾವಿ ಹಾಗೂ ರಾಷ್ಟಿçÃಯ ವಾಹಕಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಂತು ಹುಳುಗಳ ಸೋಂಕಿನಿAದ ದೇಹವು ಪೋಷಕಾಂಶಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದರಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ಕಲಿಕೆಯಲ್ಲಿ ಹಿಂದುಳಿಯುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.

ಆದ್ದರಿಂದ 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಉಚಿತವಾಗಿ ನೀಡಲಾಗುವ ಆಲ್ಬೆಂಡಜೋಲ್ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.ಆಗಸ್ಟ್ 10 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಶಿಕ್ಷಕರು ಮಾತ್ರೆಗಳನ್ನು ನೀಡಲಿದ್ದಾರೆ.

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿ ಮಾತ್ರೆ ವಿತರಿಸಲಿದ್ದಾರೆ ಎಂದು ತಿಳಿಸಿದರು.

Author