ಶಿವಮೊಗ್ಗ ನಗರ ಉಪವಿಭಾಗ-2 ರ ಘಟಕ-5ರ ವ್ಯಾಪ್ತಿಯಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ
ಆ.09 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಅಶೋಕ ವೃತ್ತದಿಂದ ಅಮೀರ್ ಅಹಮದ್ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.





