ಶಿವಮೊಗ್ಗ | ಜಿಲ್ಲಾ ಮೋಚಿಗರ ಸಂಘದಿಂದ ಮೊದಲನೇ ವರ್ಷದ ಪ್ರತಿಭಾ ಪುರಸ್ಕಾರ

ಶಿವಮೊಗ್ಗ

ಶಿವಮೊಗ್ಗ ನಗರದ ಅಶ್ವತ್ ನಗರದಲ್ಲಿರುವ ಶಿವಮೊಗ್ಗ ಜಿಲ್ಲಾ ಮೋಚಿಗರ ಸಭಾಭವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೋಚಿಗಾರ ಸಮಾಜದ ವತಿಯಿಂದ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಐದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲಾಯಿತು.

ವಿದ್ಯಾರ್ಥಿಗಳಾದ ಸಿಂಚನ ಜಿ. ಪ್ರಾರ್ಥನಾ ಎ. ತನು ಎನ್. ಆದ್ಯ ಎಸ್‌.ಜಿ. ನಂದಿತಾ ಆರ್ ರವರಿಗೆ ಸನ್ಮಾನಿಸಿ ಪ್ರೋತ್ಸಾಹ ಧನವನ್ನು ಸ್ವೀಕರಿಸಿದರು.

ಈ ಕಾರ್ಯಕ್ರಮಕ್ಕೆ ಮೋಚಿಗರ ಸಂಘದ ಅಧ್ಯಕ್ಷರಾದ ರಾಜು ಎಸ್ ಹಾಗೂ ಜಿಲ್ಲಾ ಗೌರವಾಧ್ಯಕ್ಷರಾದ M ಶಿವಣ್ಣ ಮಾಜಿ ಅಧ್ಯಕ್ಷರಾದ ಮಲ್ಲಪ್ಪ S ಇವರ ಅಧ್ಯಕ್ಷತೆಯಲ್ಲಿ S P ಶಿವಕುಮಾರ್ ರವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್ ರಾಜು ರವರು 25,000/-₹ ಗಳನ್ನು ಸಂಘದ ಕಟ್ಟಡದ ಅಭಿವೃದ್ಧಿಗಾಗಿ ದೇಣಿಗೆ ನೀಡಿದರು ಈ ಸಂದರ್ಭದಲ್ಲಿ ಅಧ್ಯಕ್ಷರು ಮಾತನಾಡಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು.

ಹಾಗೂ ಈ ಒಂದು ಕಾರ್ಯಕ್ರಮದಲ್ಲಿ ಪ್ರೋತ್ಸಾಹ ಧನ ಪಡೆದ ವಿದ್ಯಾರ್ಥಿಗಳ ಪೋಷಕರು ಸಂಘದ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Author