ಶಿವಮೊಗ್ಗ | ಅ. 26 ರಿಂದ ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ಪ್ರವಾದಿ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್‌ ಅಭಿಯಾನ

ಶಿವಮೊಗ್ಗ

ಶಿವಮೊಗ್ಗ,ಜಮಾಅತೆ ಇಸ್ಲಾಮಿ ಹಿಂದ್‌ಕರ್ನಾಟಕದ ವತಿಯಿಂದ ಅ. 26 ರಿಂದ ಸೆ. 06ರ ತನಕ ಪ್ರವಾದಿ ಮುಹಮ್ಮದ್ ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್‌ ಅಭಿಯಾನ ನಡೆಯಲಿದೆ.

ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಮಾಅತೆ ಇಸ್ಲಾಮಿ ಹಿಂದ್ ಶಿವಮೊಗ್ಗ ಇದರ ಜಿಲ್ಲಾ ಸಂಚಾಲಕಜನಾಬ್ ಅಕ್ರಮುಲ್ಲಾ ಶರೀಫ್,ಅಭಿಯಾನದ ಶೀರ್ಷಿಕ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಎನ್ನುವುದಾಗಿದೆ.

ಪ್ರವಾದಿ ಮುಹಮ್ಮದವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿತ್ತು. ಅವರ ಸಂದೇಶವು ಜನರ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಹಾಗೂ ಸಮಾಜವನ್ನು ಪರಿವರ್ತಿಸಿತು ಎಂದರು ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಅಭಿಯಾನದ ಪ್ರಯುಕ್ತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದಮುಹಮ್ಮದ ವರ ಈ ಸಂದೇಶಗಳನ್ನು’ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್ ಹಾಗೂ ವಾರ್ತಾ ಭಾರತಿಯ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಬರೆದ ‘ಸಮಗ್ರ ಕ್ರಾಂತಿಯ ಜೋತಿ ಬೆಳಗಿದ ಪೈಗಂಬರ್ ಮುಹಮ್ಮದ್ ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಯಾಲಿಗಳು ಹೀಗೆ ಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು. ಎಂದರು.

ಸ್ಥಾನೀಯ ಕಾರ್ಯಕ್ರಮಗಳು : ಸೀರತ್ ಸಂವಾದ ಕಾರ್ಯಕ್ರಮ, ವಿಚಾರಗೋಷ್ಠಿಗೆಟ್ ಟುಗೆದರ್ಅಂತರ್ಧಮಿ್ರಯ ಸಂವಾದ,ಪ್ರಬಂಧ ಸ್ಪರ್ಧೆ,ರಕ್ತದಾನ ಶಿಬಿರ, ಆಸ್ಪತ್ರೆಗಳಲ್ಲಿ ರೋಗಿಗಳ ಭೇಟಿ,ವೃದ್ಧಾಶ್ರಮಗಳ ಭೇಟಿ ಇತ್ಯಾದಿ ನಫೆಯಾಳಿವೆ ಎಂದು ವಿವರಿಸಿದರು.

Author