ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮವು 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶೈಕ್ಷಣಿಕ ಸಾಲ ಯೋಜನೆಯಡಿ ಬಸವ ಬೆಳಗು ಯೋಜನೆ (ಹೊಸ ಮತ್ತು ನವೀಕರಣ) ಮತ್ತು ವಿದೇಶ ವಿದ್ಯಾವಿಕಾಸ ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯಗಳ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
2024-25 ಹಾಗೂ 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ ಇಲ್ಲಿ ಪಡೆಯಬಹುದಾಗಿದೆ. ದೂ.ಸಂ. 08182-229634 ನ್ನು ಸಂಪರ್ಕಿಸಬಹುದಾಗಿರುತ್ತದೆ.





