ಶಿವಮೊಗ್ಗ,ರಾಜ್ಯ ಕಾಂಗ್ರೆಸ್ ನಾಯಕತ್ವವು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಎಚ್.ಸಿ. ಯೋಗೇಶ್ ಅವರನ್ನು ಆಯ್ಕೆ ಮಾಡಿದೆ.ಕಾಂಗ್ರೆಸ್‌ನ ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪಕ್ಷದ ವೀಕ್ಷಕರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಎಚ್.ಸಿ. ಯೋಗೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿದೆ.ಯುವ ನಾಯಕತ್ವಕ್ಕೆ ಆದ್ಯತೆ ನೀಡಿರುವ ಕಾಂಗ್ರೆಸ್, ಜಿಲ್ಲೆಯ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವ ಮಹತ್ವದ ಜವಾಬ್ದಾರಿಯನ್ನು ಎಚ್.ಸಿ. ಯೋಗೇಶ್ ಅವರ ಹೆಗಲಿಗೆ ನೀಡಿದೆ.
ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಯುವ ಸಮೂಹವನ್ನು ಕಾಂಗ್ರೆಸ್‌ನತ್ತ ಸೆಳೆಯುವುದು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವ ಸವಾಲು ಇದೀಗ ನೂತನ ಜಿಲ್ಲಾಧ್ಯಕ್ಷರ ಮುಂದಿದೆ.ಎಚ್.ಸಿ. ಯೋಗೇಶ್ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.





