ಬೆಂಗಳೂರು, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಹಾಗೂಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ ಬಯ್ಯಾಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಾಜ್ಯ ಸಹಕಾರಿ ಬ್ಯಾಂಕ್ಗೆ ಜನವರಿಯಲ್ಲೇ ಚುನಾವಣೆ ನಡೆಯಬೇಕಿತ್ತು. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಚುನಾವಣೆ ಸುಮಾರು ನಾಲ್ಕು ತಿಂಗಳು ತಡವಾಗಿ ನಡೆದಿದೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು,
ಬೇರೆ ಯಾರೂ ನಾಮಪತ್ರ ಸಲ್ಲಿಸದ ಎಸ್. ರವಿ ಮತ್ತು ಶರಣಗೌಡ ಪಾಟೀಲ ಬಯ್ಯಾಪುರ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪೈಕಿ ಸಿದ್ದರಾಮಯ್ಯ ಅವರ ಆಪ್ತ ಕೆ.ಎನ್. ರಾಜಣ್ಣ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಇದರ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಅಪಸ್ವರ ಎತ್ತಿದ್ದು, ಎಸ್. ರವಿ ಹೆಸರನ್ನು ಸೂಚಿಸಿದ್ದರು.
ಈ ನಡುವೆ ಬುಧವಾರ ಅಪೆಕ್ಸ್ ಬ್ಯಾಂಕ್ನ 19 ನಿರ್ದೇಶಕರೊಂದಿಗೆ ಸಹಕಾರ ಸಚಿವ ಲಕ್ಷ್ಮಣ ಸವದಿ ನಡೆಸಿದ್ದರು. ಸಭೆಯಲ್ಲಿ ಬಹುತೇಕ ನಿರ್ದೇಶಕರು ಎಸ್. ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಬಳಿಕ ಸವದಿ ಮತ್ತು ರಾಜಣ್ಣ ನಡುವೆ ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ಅಂತಿಮವಾಗಿ ಎಸ್. ರವಿ ಅವರನ್ನು ಆಯ್ಕೆ ಮಾಡಲಾಗಿದೆ.





