ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಡೇಯೂರಿನಲ್ಲಿ ಕಳೆದ 30 ವರ್ಷಗಳಿಂದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅಂದರೆ 3 ದಶಕಗಳಿಂದ , ಭಕ್ತಿ ಹಾಗೂ ಸೌಹಾರ್ದತೆಯಿಂದ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ.

ಗ್ರಾಮದ ಎಲ್ಲ ವರ್ಗದ ಜನರು ಒಗ್ಗಟ್ಟಾಗಿ ಸೇರಿ ಗಣಪತಿ ಹಬ್ಬವನ್ನು ಆಚರಿಸುವುದು ಇಲ್ಲಿನ ವಿಶೇಷತೆ. ಮೂರು ದಶಕಗಳಿಂದ ನಡೆದುಕೊಂಡು ಬಂದಿರುವ ಈ ಸಂಪ್ರದಾಯವು ಭಕ್ತಿ, ಸಹಬಾಳ್ವೆ ಮತ್ತು ಗ್ರಾಮಸ್ಥರ ಒಗ್ಗಟ್ಟಿನ ಸಂಕೇತವಾಗಿದೆ.

ಪ್ರತಿ ವರ್ಷವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವವನ್ನು ಆಚರಿಸಲಾಗುತ್ತಿದ್ದು, ಯುವಕರು ಸೇರಿದಂತೆ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ. 30 ವರ್ಷಗಳ ಈ ಸೌಹಾರ್ದ ಪರಂಪರೆ ಮುಂದಿನ ಪೀಳಿಗೆಗೂ ಮಾದರಿಯಾಗಲಿ ಎಂಬುದು ಗ್ರಾಮಸ್ಥರ ಆಶಯ.





