ಶಿವಮೊಗ್ಗ | ಭದ್ರಾವತಿಯ ಮೂಲೆಕಟ್ಟೆಯಲ್ಲಿ ಓಂಕಾರ್ ಗೆಳೆಯರ ಬಳಗ ವತಿಯಿಂದ ನಾಲ್ಕನೇ ವರ್ಷದ ಗಣಪತಿ ಪ್ರತಿಷ್ಠಾಪನೆ ಸಂಭ್ರಮ

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೂಲೆಕಟ್ಟೆ ಗ್ರಾಮದಲ್ಲಿ ಓಂಕಾರ್ ಗೆಳೆಯರ ಬಳಗ ವತಿಯಿಂದ ನಾಲ್ಕನೇ ವರ್ಷದ ಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಯುವಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗಣೇಶನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಪ್ರತಿ ವರ್ಷದಂತೆ ಈ ವರ್ಷವೂ ಓಂಕಾರ್ ಗೆಳೆಯರ ಬಳಗದ ಸದಸ್ಯರು ಒಗ್ಗಟ್ಟಿನಿಂದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.

Author