ಶಿವಮೊಗ್ಗ | ಬಾವಿಗೆ ಬಿದ್ದು ಸಾವನಪ್ಪಿದ ನಿವೃತ್ತ ಕುಲಪತಿ ಎಂ.ಕೆ. ನಾಯ್ಕ್ ನಿಧನಕ್ಕೆ ಮಧು ಬಂಗಾರಪ್ಪ ಕಂಬನಿ

ಶಿವಮೊಗ್ಗ

ಶಿವಮೊಗ್ಗ,ಹೆಸರಾಂತ ಕೃಷಿ ವಿಜ್ಞಾನಿ ಹಾಗೂ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಕೆ.ನಾಯ್ಕ್‌ ಅವರ ನಿಧನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಯ್ಕ್‌ ಅವರ ಅಕಾಲಿಕ ನಿಧನ ರಾಜ್ಯದ ಮತ್ತು ದೇಶದ ಕೃಷಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ.

ಶಿವಮೊಗ್ಗ ಕೃಷಿ ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಅವರು, ವಿವಿಯ ಅಭಿವೃದ್ಧಿ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಉತ್ತಮ ಕೆಲಸ ಮಾಡಿದ್ದರು. ಧಾರವಾಡ ಮತ್ತು ರಾಯಚೂರು ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.

ಕೃಷಿ ಕ್ಷೇತ್ರದಲ್ಲಿನ ಸಂಶೋಧನೆ ಮತ್ತು ಸಾಧನೆಗಾಗಿ ರಾಷ್ಟ್ರಮಟ್ಟದ ಹಲವು ಪುರಸ್ಕಾರಗಳಿಗೆ ಬಾಜನರಾಗಿದ್ದ ಎಂ.ಕೆ.ನಾಯ್ಕ್‌ ನಿಧನ ನಮಗೆ ಅತೀವವಾದ ಶೋಕ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಮತ್ತು ಅವರ ಶಿಷ್ಯ ಕೋಟಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮಧು ಬಂಗಾರಪ್ಪ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

Author