ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದಿನಿಂದ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳನ್ನು ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಪ್ರಯುಕ್ತ ನರೇಂದ್ರ ಮೋದಿಜಿ ಅವರಿಗೆ ದೇವರು ಆಯುರಾರೋಗ್ಯ ಆಯಸ್ಸು ಕೋರಿ ದೇವರು ಶಕ್ತಿ ನೀಡಲಿ ಎಂದು ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಸದ ಬಿ. ವೈ.ರಾಘವೇಂದ್ರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನದ ಆವರಣದಲ್ಲಿ ಒಂದು ತಿಂಗಳ ಕಾಲ ನಡೆಯುವ ಸೇವಾ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಗದೀಶ್ ಎನ್.ಕೆ, ಶಿವಮೊಗ್ಗ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಧನಂಜಯ ಸರ್ಜಿ ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಜ್ಞಾನೇಶ್ವರ್ ಎನ್ ಜಿ ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆ ನವಲೆ ದಿನದಯಾಳು, ನಗರ ಪ್ರಭಾರಿ ಕುಪೇಂದ್ರ ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.





