ಶಿವಮೊಗ್ಗದ ಎನ್.ಟಿ. ರಸ್ತೆಯ ಗಂಧರ್ವ ನಗರದ ಶ್ರೀ ಚೌಡೇಶ್ವರಿ ಸೇವಾ ಸಂಘದ ವತಿಯಿಂದ ಈ ಬಾರಿಯೂ ಅದ್ಧೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ.
ಈ ಬಾರಿ ಗೋಕರ್ಣದ ಮಹಾಬಲೇಶ್ವರ ದೇವಾಲಯದ ಅಲಂಕಾರ ಮಾಡಲಾಗಿದ್ದು, ಇದು ನೋಡುಗರ ಕಣ್ಮನ ಸೆಳೆಯುತ್ತಿದೆ. ಕಳೆದ 13 ವರ್ಷಗಳಿಂದ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಪ್ರತಿ ವರ್ಷ ವಿಭಿನ್ನ ಅಲಂಕಾರಗಳಿಂದ ಗಮನ ಸೆಳೆಯುತ್ತಿದೆ.

ಗಣೇಶೋತ್ಸವದ ಪ್ರಯುಕ್ತ ಸೆ. 19 ರ ಶನಿವಾರದಂದು, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಆಯೋಜಿಸಲಾಗಿದೆ. ಸೆ. 20 ರ ಭಾನುವಾರ ಬೆಳಿಗ್ಗೆ 11.30 ಕ್ಕೆ ಶ್ರೀ ವಿಘ್ನೇಶ್ವರ ಸ್ವಾಮಿಯ ಗಣಹೋಮ ಪೂಜೆ ನೆರವೇರಲಿದ್ದು, ಅನ್ನ ಸಂತರ್ಪಣೆ ಕಾರ್ಯಕ್ರಮ ಕೂಡ ನೆರವೇರಲಿದೆ.
ಸೆ. 26 ರಂದು ಡೊಳ್ಳು ಕುಣಿತದೊಂದಿಗೆ ಶ್ರೀ ಸ್ವಾಮಿಯ ರಾಜಬೀದಿ ಉತ್ಸವ ನೆರವೇರಲಿದೆ. ಈ ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರು ಆಗಮಿಸಿ, ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಸಂಘದ ಸದಸ್ಯರು ಕೋರಿದ್ದಾರೆ.





