ಶಿವಮೊಗ್ಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಣ ಶಿವಪ್ಪ ನಾಯಕ ಅರಮನೆ ಆವರಣ ಪರಿಶೀಲಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ

ಶಿವಮೊಗ್ಗ, ನಗರದ ಸಾಂಸ್ಕೃತಿಕ ಹಿರಿಮೆಯನ್ನು ಸಾರುವ ‘ಶಿವಮೊಗ್ಗ ದಸರಾ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಳ್ಳಲಾಗುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಿವಪ್ಪ ನಾಯಕ ಅರಮನೆ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಆಸನ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ ಹಾಗೂ ಧ್ವನಿ-ಬೆಳಕಿನ ವ್ಯವಸ್ಥೆಗಳಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಚಂದ್ರ ಸೇರಿದಂತೆ ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.

Author