ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾರ್ಗ ಪರಿಶೀಲಿಸಿದ ಐಜಿ N.ಸತೀಶ್ ಕುಮಾರ್

ಶಿವಮೊಗ್ಗ

ಶಿವಮೊಗ್ಗ,ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ತೀರ್ಥಹಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.ದಾವಣಗೆರೆ ವಲಯದ ಐಜಿ ಸತೀಶ್ ಕುಮಾರ್ ಅವರು ಇಂದು ಶಿವಮೊಗ್ಗ ನಗರದಲ್ಲಿ ಗಣಪತಿ ಮೆರವಣಿಗೆ ಸಾಗುವ ಪ್ರಮುಖ ಮಾರ್ಗಗಳನ್ನು ಪರಿಶೀಲಿಸಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಜೊತೆಯಲ್ಲಿದ್ದು, ಭದ್ರತಾ ವ್ಯವಸ್ಥೆ ಹಾಗೂ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಯಾವುದೇ ಅಹಿತಕರ ಘಟನೆ ಅಥವಾ ಕೋಮು ಸಂಘರ್ಷಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ಹೆಚ್ಚಿಸಿ, ಸಂಚಾರ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಐಜಿ ಅಧಿಕಾರಿಗಳಿಗೆ ಸೂಚಿಸಿದರು.

ಐಜಿ ಸತೀಶ್ ಕುಮಾರ್ ಅವರು ಇಂದು ಮತ್ತು ನಾಳೆ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

Author