ಶಿವಮೊಗ್ಗ | ಟ್ಯಾಂಕ್ ಮೊಹಲ್ಲಾದಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಅದ್ದೂರಿ ಗಣೇಶೋತ್ಸವ

ಶಿವಮೊಗ್ಗ

ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಅದ್ದೂರಿ ಗಣೇಶೋತ್ಸವ ಟ್ಯಾಂಕ್ ಮೊಹಲ್ಲಾ ಮುಖ್ಯ ರಸ್ತೆಯಲ್ಲಿ ಕೇಸರಿ ಪಡೆ ವತಿಯಿಂದ 25ನೇ ವರ್ಷದ ಅದ್ದೂರಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 22, 2026ರಂದು ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುವಂತೆ ಕೇಸರಿ ಪಡೆ ಸಮಿತಿ ಮನವಿ ಮಾಡಿದೆ.ಇನ್ನು ಸೆಪ್ಟೆಂಬರ್ 23, 2026ರ ಸಂಜೆ ಅದ್ದೂರಿ ರಾಜಬೀದಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ಡೊಳ್ಳು ಕುಣಿತ, ಸ್ಟ್ಯಾಂಡಿಂಗ್ ಡಿಜೆ ಸೇರಿದಂತೆ ವಿವಿಧ ಆಕರ್ಷಕ ಕಾರ್ಯಕ್ರಮಗಳು ಇರಲಿವೆ. ರಾಜಬೀದಿ ಉತ್ಸವದ ಮೂಲಕ ಗಣಪತಿಯನ್ನು ಅದ್ದೂರಿಯಾಗಿ ಮೆರವಣಿಗೆಯಲ್ಲಿ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ.

{“remix_data”:[],”remix_entry_point”:”challenges”,”source_tags”:[],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{},”is_sticker”:false,”edited_since_last_sticker_save”:false,”containsFTESticker”:false}

ಕೇಸರಿ ಬಣ್ಣದಲ್ಲಿ ಕಂಗೊಳಿಸುತ್ತಿರುವ ಟ್ಯಾಂಕ್ ಮೊಹಲ್ಲಾ25ನೇ ವರ್ಷದ ಗಣೇಶೋತ್ಸವದ ಹಿನ್ನೆಲೆಯಲ್ಲಿ ಟ್ಯಾಂಕ್ ಮೊಹಲ್ಲಾ ಮುಖ್ಯ ರಸ್ತೆಯು ಕೇಸರಿ ಬಣ್ಣದ ಅಲಂಕಾರದಿಂದ ಕಂಗೊಳಿಸುತ್ತಿದೆ. ರಸ್ತೆಯ ಮಧ್ಯಭಾಗದಲ್ಲಿ ಅಳವಡಿಸಿರುವ ‘ಜೈ ಶ್ರೀ ರಾಮ್’ ವಿದ್ಯುತ್ ನಾಮಫಲಕಗಳು ಹಾಗೂ ವಿಶೇಷ ವಿದ್ಯುತ್ ಅಲಂಕಾರಗಳು ನೋಡುಗರ ಗಮನ ಸೆಳೆಯುತ್ತಿವೆ.ಗಣೇಶೋತ್ಸವದ ಅಂಗವಾಗಿ ಪ್ರತಿದಿನವೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಂಗೋಲಿ ಸ್ಪರ್ಧೆ, ವಿವಿಧ ಆಟೋಟಗಳಂತಹ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ಜನರ ಗಮನ ಸೆಳೆಯುತ್ತಿವೆ.

25ನೇ ವರ್ಷದ ಈ ವಿಶೇಷ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಕೇಸರಿ ಪಡೆ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಸಮಸ್ತ ಹಿಂದೂ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೇಸರಿ ಪಡೆ ಸಮಿತಿ ಮನವಿ ಮಾಡಿದೆ.

“ಟ್ಯಾಂಕ್ ಮೊಹಲ್ಲಾದಲ್ಲಿ ಕಂಗೊಳಿಸುತ್ತಿರುವ ಕೇಸರಿ ಪಡೆ ಗಣಪ – ಭಕ್ತಿ, ಸಂಭ್ರಮ ಮತ್ತು ಸಾಂಸ್ಕೃತಿಕ ವೈಭವದ 25ನೇ ವರ್ಷದ ಸಂಭ್ರಮ” ಎಂಬಂತೆ ಇಡೀ ಪ್ರದೇಶದಲ್ಲಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದೆ.

Author