ಶಿವಮೊಗ್ಗ | ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ರಿಷಿ ಆನಂದ್ ನೇಮಕ

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂತನ (ಸಿಇಒ) ಆಗಿ ರಿಷಿ ಆನಂದ್ ನೇಮಕ ಮಾಡಲಾಗಿದೆ.

ಹುದ್ದೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಯಾಗಿದೆ.ರಾಜ್ಯ ಸರ್ಕಾರವು ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ 2020ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಿಷಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ನೇಮಕಗೊಂಡಿರುವ ರಿಷಿ ಆನಂದ್ ಅವರು ಇದುವರೆಗೆ ವಿಜಯಪುರ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತದ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರನ್ನು ಇದೀಗ ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

Author