ಶಿವಮೊಗ್ಗ | ಹಿಂದೂ ಮಹಾಗಣಪತಿ ವಿಸರ್ಜನಾ ಮಹಾ ಶೋಭಾಯಾತ್ರೆಗೆ ಸಕಲ ಸಿದ್ಧತೆ : ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕೇಸರಿ ಅಲಂಕಾರ ಸಮಿತಿ ಜತೆ ಶಾಸಕ ಎಸ್.ಎನ್. ಚನ್ನಬಸಪ್ಪ ಸಭೆ!

ಶಿವಮೊಗ್ಗ

ಶಿವಮೊಗ್ಗ,ನಗರದ ಹೆಮ್ಮೆಯ ಹಾಗೂ ಧಾರ್ಮಿಕ ಭಾವೈಕ್ಯತೆಯ ಪ್ರತೀಕವಾಗಿರುವ ಹಿಂದೂ ಸಂಘಟನಾ ಮಹಾಮಂಡಳಿಯ ಶ್ರೀ ಮಹಾಗಣಪತಿ ವಿಸರ್ಜನಾ ಮಹೋತ್ಸವವು ಶುಕ್ರವಾರ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಈ ಬೃಹತ್ ಶೋಭಾಯಾತ್ರೆಯನ್ನು ಯಾವುದೇ ಗೊಂದಲಗಳಿಲ್ಲದೆ, ಅತ್ಯಂತ ಸುರಕ್ಷಿತವಾಗಿ ಸಂಪನ್ನಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ.

ಉತ್ಸವದ ಪೂರ್ವಸಿದ್ಧತೆಗಳ ಅಂಗವಾಗಿ ಇಂದು ಹಿಂದೂ ಕೇಸರಿ ಅಲಂಕಾರ ಸಮಿತಿಯ ಮುಖಂಡರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದ ಶಾಸಕರು, ಮೆರವಣಿಗೆ ಸಾಗುವ ಸ್ಥಳದಲ್ಲಿ ಸಾರ್ವಜನಿಕ ಸುರಕ್ಷತೆ, ಸಿಸಿಟಿವಿ ಕಣ್ಗಾವಲು, ಸಂಚಾರ ಮಾರ್ಗ ಬದಲಾವಣೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.

ಸಭೆಯಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳಾದ ನಿಖಿಲ್ ಬಿ, ಶಿವಮೊಗ್ಗ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಇಂದು ಕೇಸರಿ ಅಲಂಕಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Author