ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ಮಲೆನಾಡಿನ ಹೆಮ್ಮೆಯ ‘ಶಿವಮೊಗ್ಗ ದಸರಾ ಮಹೋತ್ಸವ’ವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಭೇಟಿ ನೀಡಿ ಅಧಿಕೃತ ಮನವಿ ಪತ್ರ ಸಲ್ಲಿಸಿದರು.
ಪ್ರತಿವರ್ಷ ಅತ್ಯಂತ ಸಡಗರದಿಂದ ನಡೆಯುವ ಶಿವಮೊಗ್ಗ ನಗರ ದಸರಾ ಮಹೋತ್ಸವಕ್ಕೆ ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಸಾಕ್ಷಿಯಾಗಲಿದ್ದು, ಉತ್ಸವದ ಯಶಸ್ವಿ ಆಯೋಜನೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಶಾಸಕರ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ.





