ಹಿರಿಯ ನಟ ಅನಂತ್ ನಾಗ್ ಗೆ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಪ್ರದಾನ

ದೇಶ

ಏಕ್ತಾ ನಗರ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಲನಚಿತ್ರ ರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದರು. ಇದಕ್ಕು ಮುನ್ನ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸಿದ ಅನಂತ್ ನಾಗ್ ಅವರಿಗೆ ಸ್ಟ್ಯಾಂಡಿಂಗ್ ಒವೇಶನ್ ನೀಡಲಾಯಿತು.

ಇಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಏಕ್ತಾ ನಗರದಲ್ಲಿರುವ ‘ಸ್ಟ್ಯಾಚ್ಯೂ ಆಫ್ ಯೂನಿಟಿ’ಯಲ್ಲಿ ನಡೆಯುತ್ತಿರುವ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, 2024ನೇ ಸಾಲಿನ ಸಿನಿಮಾ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ವಿವಿಧ ವಿಭಾಗಗಳಲ್ಲಿ ಒಟ್ಟು 92 ಮಂದಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.

Author