ಶಿವಮೊಗ್ಗ | ಸೆ.28 ರಂದು ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ಅಧ್ಯಕ್ಷ ಶಾಂತವೀರನಾಯಕರಿಗೆ ಸನ್ಮಾನ ಕಾರ್ಯಕ್ರಮ

ರಾಜಕೀಯ

ಶಿವಮೊಗ್ಗ ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಶಾಂತವೀರನಾಯಕ ಇವರಿಗೆ ಇದೇ 28ರಂದು ಭವ್ಯ ಸ್ವಾಗತ ಕೋರಲು ಅಭಿಮಾನಿಗಳು ಸಕಲ ಸಿದ್ದತೆಯನ್ನು ಮಾಡಿಕೊಂಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗ, ಸೆಪ್ಟೆಂಬರ್ 28 ರ ಬೆಳಿಗ್ಗೆ 10.30ಕ್ಕೆ ಎಂ.ಆರ್.ಎಸ್ ಸರ್ಕಲ್ ನಲ್ಲಿ ನೂತನ ಅಧ್ಯಕ್ಷರನ್ನು ಭವ್ಯವಾಗಿ ಸ್ವಾಗತಿಸಿ, ಬೃಹತ್ ಬೈಕ್ ರ್ಯಾಲಿ ಮುಖಾಂತರ ಅವರನ್ನು ಮೆರವಣಿಗೆಯ ಮೂಲಕ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಕರೆತರಲಾಗುವುದು.

ಬೆ.11 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಸಿ. ಯೋಗೀಶ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ, ಶಾಸಕರುಗಳಾದ, ಬಿ.ಕೆ.ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡ, ಸೂಡ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್, ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ, ಜವಳಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಯೋಜನಾ ಸಮಿತಿ ಅಧ್ಯಕ್ಷರಾದ ಚಂದ್ರಭೂಪಾಲ್, ಕಾಂಗ್ರೆಸ್ ಮುಖಂಡರುಗಳಾದ ಕಿಮ್ಮನೆ ರತ್ನಾಕರ್, ಆಯನೂರು ಮಂಜುನಾಥ್, ಗೋಣಿ ಮಾಲತೇಶ್, ಡಾ. ಶ್ರೀನಿವಾಸ ಕರಿಯಣ್ಣ, ಎಂ.ಶ್ರೀಕಾಂತ್, ಎಸ್.ಕೆ.ಮರಿಯಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರಮೇಶ್, ಕಲಗೋಡ್ ರತ್ನಾಕರ್, ನಾಗರಾಜ್ ಗೌಡ, ಪಿ.ಓ.ಶಿವಕುಮಾರ್, ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಮಹಿಳಾ ವಿಭಾಗ, ಯುವ ಘಟಕ ಹಾಗೂ ಎನ್‍ಎಸ್‍ಯುಐ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲಿದ್ದಾರೆ.

Author