ಶಿವಮೊಗ್ಗ ಗ್ರಾಮ ಪಂಚಾಯಿತಿ ಆಗರದಹಳ್ಳಿಯಲ್ಲಿ ಆರ್.ಡಿ.ಎಫ್. ಟ್ರಾಂಚ್–31ರ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಭಾಗವಹಿಸಿ, ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಗ್ರಾಮೀಣ ಭಾಗದ ರೈತರು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ಅಗತ್ಯ ಪಶುವೈದ್ಯಕೀಯ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗಲು ಈ ಪಶು ಚಿಕಿತ್ಸಾಲಯವು ಸಹಕಾರಿಯಾಗಲಿದೆ. ಜಾನುವಾರುಗಳ ಆರೋಗ್ಯ ರಕ್ಷಣೆ ಹಾಗೂ ರೈತರ ಆರ್ಥಿಕ ಚಟುವಟಿಕೆಗಳಿಗೆ ಪಶುಸಂಗೋಪನಾ ಕ್ಷೇತ್ರದ ಸೇವೆಗಳು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪುವಂತಾಗಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


