ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಳೇ ಕುಂಸಿ ಗ್ರಾಮದಲ್ಲಿ ಬ್ರಾಹ್ಮಣ ಕೇರಿಯಿಂದ ರೇಚಿಕೊಪ್ಪದವರೆಗೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ಕಾಮಗಾರಿಗೆ ಇಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಯಿಂದ ಹಳೇ ಕುಂಸಿ ಹಾಗೂ ರೇಚಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕಿ ಶಾರದಾ ಪುರ್ಯ ನಾಯ್ಕ್ ತಿಳಿಸಿದರು.
ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ ಶಾಸಕರು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
