ಶಿವಮೊಗ್ಗ ಜಿಲ್ಲೆಯ ‘ಭಾರತ್ ಜೋಡೋ ಯುವ ಸಂಘ’ದ ನೂತನ ಜಿಲ್ಲಾ ಯುವ ಸಂಯೋಜಕರಾಗಿ ನೇಮಕಗೊಂಡಿರುವ ಶ್ರೀ ಟಿ.ಡಿ. ಗೀತೇಂದ್ರ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಅಭಿನಂದಿಸಿ, ಶುಭ ಹಾರೈಸಿದರು.
ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ (Bharat Jodo Yuva Sangha – BJYS) ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುವುದರ ಜೊತೆಗೆ ಜಿಲ್ಲೆಯ ಯುವಕರನ್ನು ಸಂಘಟಿಸಿ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಗೀತೇಂದ್ರ ಅವರಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಶರತ್ ಮರಿಯಪ್ಪ ಉಪಸ್ಥಿತರಿದ್ದರು.
